Wednesday, March 17, 2010

ವನಸುಮ

ವನಸುಮದೊಲೆನ್ನ ಜೀವನವು ವಿಕಸಿಸುವಂತೆ
ಮನವನನುಗೊಳಿಸು ಗುರುವೇ ಹೇ ದೇವ
ಜನಕೆ ಸಂತಸವೀವ ಘನನು ನಾನೆಂದೆಂಬ
ಎಣಿಕೆತೋರದೆ ಜಗದ ಪೊಗಳಿಕೆಗೆ ಬಾಯ್ಬಿಡದೇ

ಕಾನನದಿ ಮಲ್ಲಿಗೆಯು ಮೌನದಿಂ ಬಿರಿದು ನಿಜ
ಸೌರಭವ ಸೂಸಿ ನಲವಿನಿಂತಾನೆಲೆಯ ಪಿಂತಿರ್ದು
ದೀನತೆಯ ತೋರಿ ಅಭಿಮಾನವನು ತೊರೆದು
ಕೃತಕೃತ್ಯತೆಯ ಪಡೆವಂತೆ

ಉಪಕಾರಿ ನಾನು, ಎನ್ನುಪಕೃತಿಯು ಜಗಕೆಂಬ
ವಿಪರೀತ ಮತಿಯನುಳಿದು
ವಿಪುಲಾಶ್ರಯವನೀವ ಸುಫಲ ಸುಮಭರಿತ
ಪಾದಪದಂತೆ ನೈಜಮಾದೊಳ್ವಿನಿಂ ಬಾಳ್ವವೊಲು.

(ದಾರ್ಶನಿಕ ಕವಿ ಡಿವಿಜಿಯವರ ಹುಟ್ಟುಹಬ್ಬ ಇವತ್ತು. ಆ ಖುಷಿಯಲ್ಲಿ ಅವರ ಈ ಅರ್ಥಪೂರ್ಣ ಕವನವನ್ನು ಇನ್ನೋಮ್ಮೆ ಗುನುಗೋಣ)

No comments: